Monday, June 8, 2026
Homeಕರಾವಳಿಸ್ಯಾಟಲೈಟ್ ಫೋನ್ ಕರೆ: ಶಂಕಿತ ಸ್ಥಳಗಳಿಗೆ ಅಧಿಕಾರಿಗಳ ಭೇಟಿ!

ಸ್ಯಾಟಲೈಟ್ ಫೋನ್ ಕರೆ: ಶಂಕಿತ ಸ್ಥಳಗಳಿಗೆ ಅಧಿಕಾರಿಗಳ ಭೇಟಿ!

- Advertisement -
- Advertisement -

ಮಂಗಳೂರು: ಇತ್ತೀಚಿಗಷ್ಟೇ ಸುದ್ದಿಯಾಗಿದ್ದ ಸ್ಯಾಟಲೈಟ್ ಫೋನ್ ಕರೆಗೆ ಸಂಬಂಧಿಸಿದಂತೆ ಕೇಂದ್ರ ಗುಪ್ತಚರ ವಿಭಾಗ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಗುರುವಾರ ಶಂಕಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸದ್ದಾಗಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿತ್ತು . ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!