ಬೆಳ್ತಂಗಡಿ: ವಿಶೇಷ ಚೇತನರಿಗೆ ಗುರುತಿನ ಚೀಟಿಯನ್ನು ನೀಡಲು ವಿಶೇಷ ಆಂದೋಲನವನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಒಟ್ಟು 48 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿಶೇಷ ಚೇತನರಿಗೆ ಈವರೆಗೆ UDID ಗುರುತಿನ ಚೀಟಿಯನ್ನು ಪಡೆದುಕೊಳ್ಳದ ವಿಕಲ ಚೇತನರು ಗ್ರಾಮ ಪಂಚಾಯ್ತಿಗೆ ತಮ್ಮ ಆಧಾರ್ ಕಾರ್ಡ್,2013ರ ನಂತರದ ವಿಕಲಚೇತನರ ಗುರುತಿನ ಚೀಟಿ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ನೀಡಬೇಕು.

ದಾಖಲೆ ಪತ್ರಗಳನ್ನು ನಿಗದಿತ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಪ್ರತೀ ಗ್ರಾಮ ಪಂಚಾಯ್ತಿಗೆ ಕಾರ್ಯಕರ್ತರನ್ನು ಆಯೋಜಿಸಲಾಗಿದೆ. ಕಾರ್ಯಕರ್ತರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ, ದಿನಾಂಕ ನಿಗದಿಪಡಿಸಿ, ನಿಗದಿತ ದಿನಾಂಕದಂದು ವಿಶೇಷ ಚೇತನರನ್ನು ಸಂಪರ್ಕಿಸಿ ಅಗತ್ಯವಿರುವ ದಾಖಲೆಗಳೊಂದಿಗೆ ಗ್ರಾಮ ಪಂಚಾಯ್ತಿಗೆ ಬರಲು ತಿಳಿಸಲು ಸೂಚಿಸಲಾಗಿದೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಈ ಬಗ್ಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ಸೂಚಿಸಲಾಗಿದೆಯೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ತಿಳಿಸಿದ್ದಾರೆ.