Wednesday, June 3, 2026
Homeಕರಾವಳಿಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು: ನ್ಯಾ. ಸಂತೋಷ್ ಹೆಗ್ಡೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು: ನ್ಯಾ. ಸಂತೋಷ್ ಹೆಗ್ಡೆ

- Advertisement -
- Advertisement -

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವುದು ಉಚಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಅಭಿಪ್ರಾಯವನ್ನು ಹಂಚಿಕೊಂಡರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇನೂ ಅಪರಾಧ ಮಾಡಿಲ್ಲವೆಂದು ಹೇಳಿದ್ದಾರೆ. ಆದರೆ ಈಗ ಆರೋಪಗಳಿಗೆ ಸಂಬಂಧಿಸಿ ಪುರಾವೆಗಳಿವೆ ಎಂದು ಹೈಕೋರ್ಟ್ ಹೇಳಿದೆ. ಕಾನೂನು ಹೋರಾಟ ಮಾಡಲು ಮುಖ್ಯಮಂತ್ರಿಗೆ ಅವಕಾಶವಿದೆ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ರಾಜೀನಾಮೆ ನೀಡುವುದೇ ಸರಿ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ‌ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ. ಅದು ಆಮೇಲಿನ ವಿಷಯ. ಆದರೆ ಸದ್ಯ ಗಂಭೀರವಾದ ಆರೋಪ ಬಂದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

- Advertisement -

Latest News

error: Content is protected !!