Thursday, June 25, 2026
Homeಉದ್ಯಮತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್....

ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಕ್ರೋಶ

- Advertisement -
- Advertisement -

ಮಂಗಳೂರು: ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ದೈವಸ್ಥಾನದ ನಿತ್ಯ ಆರಾಧನೆಗೆ ಮಂಗಳೂರು ಎಸ್‌ಇಝೆಡ್ ಕಂಪೆನಿಯು ಅವಕಾಶ ನೀಡದೆ, ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.

ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇಂತಹ ಇತಿಹಾಸ ಪ್ರಸಿದ್ಧ ದೈವಸ್ಥಾನಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಅಧಿಕಾರಿಗಳ ಹೇಲಿಕೆ ವಿಷಾದನೀಯ. ಈ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ. ಆರ್ಥಿಕ ವಲಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಸುಸೂತ್ರವಾಗಿ ನಡೆಯುಲು ದೈವದೇವರ ಅನುಗ್ರಹವೂ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಈ ದೈವಸ್ಥಾನಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ ಎಂದಿದ್ದಾರೆ.

ಈ ನಿಟ್ಟಿನಲ್ಲಿ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಡೆಸಲಿ. ಸಂಸದರು, ಜಿಲ್ಲಾಧಿಕಾರಿಗಳು, ಎಸ್‌ಇಝೆಡ್ ಅಧಿಕಾರಿಗಳು, ಸಂಬಂಧಪಟ್ಟವರು ಕೂಡಲೇ ಒಳ್ಳೆಯ ನಿರ್ಧಾರಕ್ಕೆ ಕೈಗೊಳ್ಳುವಂತೆ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!