Thursday, June 4, 2026
Homeತಾಜಾ ಸುದ್ದಿನಮ್ಮ ಸಿ.ಟಿ.ರವಿಗೆ ಅನ್ಯಾಯವಾಗಿದೆ; ಸರಿಪಡಿಸಲು ಪ್ರಯತ್ನಿಸುವೆ; ಯಡಿಯೂರಪ್ಪ

ನಮ್ಮ ಸಿ.ಟಿ.ರವಿಗೆ ಅನ್ಯಾಯವಾಗಿದೆ; ಸರಿಪಡಿಸಲು ಪ್ರಯತ್ನಿಸುವೆ; ಯಡಿಯೂರಪ್ಪ

- Advertisement -
- Advertisement -

ಚಿಕ್ಕಮಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ,‘ನಮ್ಮ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದ್ದು, ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡುವ ಮೂಲಕ ಅನ್ಯಾಯ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.

ಅವರು ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸರಿಯಾದ ಅವಕಾಶ ಸಿಗಲೇಬೇಕು’ ಎಂದರು.

ಬಿಜೆಪಿ ಮುಖಂಡ ಸಿ.ಟಿ.ರವಿ ಮಾತನಾಡಿ,‘ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಪಪ್ರಚಾರ ನಡೆಯಿತು. ಇದರಿಂದ ನಾನು ಸೋಲಬೇಕಾಯಿತು’ ಎಂದು ಹೇಳಿದರು.

‘ದುಡಿಯುವ ಎತ್ತಿಗೆ ಮೇವು ಹಾಕಬೇಕು ಎಂಬುದನ್ನು ಜನ ಯೋಚನೆ ಮಾಡಬೇಕಿತ್ತು. ಕಾಂಗ್ರೆಸ್‌ಗೆ ಮತ ಹಾಕಿ ಗೂಟ ಹೊಡೆಸಿಕೊಳ್ಳಬೇಕಾಯಿತು. ಮುಂದೆ ಗೂಟ ಹೊಡೆಸಿಕೊಳ್ಳಬಾರದು ಎಂದಾದರೆ ಬಿಜೆಪಿಗೆ ಮತ ಹಾಕಿ’ ಎಂದು ಮನವಿ ಮಾಡಿದರು.

- Advertisement -

Latest News

error: Content is protected !!