Wednesday, June 24, 2026
Homeಅಪರಾಧನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

- Advertisement -
- Advertisement -

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಅತಿ ದುಬಾರಿ ಪಬ್‌ ಎಂಬ ಖ್ಯಾತಿ ಪಡೆದಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ದಾಳಿ ನಡೆಸಲಾಗಿದೆ.

ಯಾವ ಕಾರಣಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಇತ್ತೀಚೆಗೆ ಐಟಿ ಅಧಿಕಾರಿಗಳು ಕೂಡ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ನಿವಾಸ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಇದರ ಮುಂದುವರಿದ ಭಾಗವಾಗಿ ಇಂದು ಬೆಂಗಳೂರಿನ ಪಬ್‌ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!