Thursday, May 16, 2024
Homeತಾಜಾ ಸುದ್ದಿಶಾಸಕ ಜಮೀರ್ ಅಹ್ಮದ್ ಮೇಲೆ ಐಟಿ ದಾಳಿ : ರೇಡ್ ವೇಳೆ ಮಹತ್ವದ ದಾಖಲೆಗಳು...

ಶಾಸಕ ಜಮೀರ್ ಅಹ್ಮದ್ ಮೇಲೆ ಐಟಿ ದಾಳಿ : ರೇಡ್ ವೇಳೆ ಮಹತ್ವದ ದಾಖಲೆಗಳು ಪತ್ತೆ

spot_img
- Advertisement -
- Advertisement -

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ಜಮೀರ್ ಅಹ್ಮದ್ ರ ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮಾಜಿ ಸಚಿವ, ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಮನೆ, ಕಚೇರಿ, ಫ್ಲ್ಯಾಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಜಮೀರ್ ಅಹ್ಮದ್ ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಮೀರ್ ಅಹ್ಮದ್ ಖಾನ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಪ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ ಆಸ್ತಿ ಮೊದಲ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳು ಬಂದಿರೋ ಸಮಯದಲ್ಲಿ ಜಮೀರ್‌ ಆಹ್ಮದ್‌ ಮನೆಯಲ್ಲೇ ಇದ್ದರು ಎನ್ನಲಾಗಿದ್ದು, ಎರಡು ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳು ಈಗಾಗಲೇ ಜಮೀರ್‌ ಆಹ್ಮದ್‌ ಅವರ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದಲ್ಲದೇ ಕೋವಿಡ್‌ ಸಮಯದಲ್ಲಿ ಜಮೀರ್‌ ಹಣಕಾಸಿನ ವ್ಯವಹಾರದ ಜೊತೆಗೆ ಅದಾಯ ತೆರಿಗೆ ಸಂಬಂದಪಟ್ಟಂತೆ ವ್ಯತ್ಯಾಸ ಇರುವುದರಿಂದ ಅಧಿಕಾರಿಗಳು ನೋಟಿಸ್‌ ನೀಡಿದ್ದರು ಕೂಡ ಅದಕ್ಕೆ ಸಂಬಂಧಪಟ್ಟಂತೆ ವಿವರಣೆ ನೀಡದೇ ಇರುವ ಹಿನ್ನಲೆಯಲ್ಲಿ ಅಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರಿನ ಜಂಬೂ ಬಜಾರ್‌ ರೋಡಿನಲ್ಲಿರುವ ಜಮೀರ್‌ ಮನೆ ಹಾಗೂ ಅವರ ಕಚೇರಿ ಮನೆಯಲ್ಲಿ ಏಕಾಏಕಿ ದಾಳಿ ನಡೆಸಿದ್ದಾರೆ. ಇವೆಲ್ಲದರ ನಡುವೆ ಶಾಸಕ ಜಮೀರ್‌ ಆಹ್ಮದ್‌ಗೆ ಬಂಧನದ ಭೀತಿ ಕೂಡ ಎದುರಾಗಿದ್ದು, ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆಸಿರುವ ಅಧಿಕಾರಿಗಳು ಇಂದು ಅದಾಯಕ್ಕೆ ಸಂಬಂಧಪಟ್ಟಂತೆ ನಡೆಸಲಿರುವ ವಿಚಾರಣೆ ವೇಳೆಯಲ್ಲಿ ತೃಪ್ತರಾಗದೇ ಇದ್ದಲ್ಲಿ ಇಲ್ಲವೇ ಸುಂಕ ಕಟ್ಟುವುದರಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಜಮೀರ್‌ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಬಹುದಾಗಿದೆ, ಇಲ್ಲದೇ ಅವರಿಗೆ ಇಂತಹ ದಿನಾಂಕದೊಳಗೆ ಅದಾಯಕ್ಕೆ ಸಂಬಂಧಪಟ್ಟಂತೆ ಕಂಡು ಬಂದಿರುವ ಮಾಹಿತಿಗೆ ಅದಾಯದ ಮೂಲವನ್ನು ತೋರಿಸಿ ಅಂತ ಐಟಿ ಅಧಿಕಾರಿಗಳು ನೋಟಿಸ್‌ ನೀಡಬಹುದಾಗಿದೆ. ಒಟ್ಟಿನಲ್ಲಿ ಇಂದು ಸಂಜೆಯೊಳಗೆ ಇವೆಲ್ಲದಕ್ಕೂ ಉತ್ತರ ಸಿಗಲಿದೆ.

- Advertisement -
spot_img

Latest News

error: Content is protected !!