Saturday, June 6, 2026
Homeಕರಾವಳಿಸುಳ್ಯ; ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ, ಐಟಿಐ ವಿದ್ಯಾರ್ಥಿ ಸಾವು

ಸುಳ್ಯ; ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ, ಐಟಿಐ ವಿದ್ಯಾರ್ಥಿ ಸಾವು

- Advertisement -
- Advertisement -

ಸುಳ್ಯ: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ.  ಐಟಿಐ ವಿದ್ಯಾರ್ಥಿ ಸುಳ್ಯದ  ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್  (19) ಮೃತ ದುರ್ದೈವಿ.

  ಬೇಕರಿಯಲ್ಲಿ ಕೆಲಸ ಮಾಡತ್ತಿರುವ ತೇಜಸ್‌ ಎಂಬ ಯುವಕನ ಜೊತೆ   ಕಲ್ಲುಗುಂಡಿಯಿಂದ ಬೈಕ್‌ನಲ್ಲಿ ಪ್ರತೀಕ್ ಸುಳ್ಯದ ಕಡೆಗೆ ಬರುತ್ತಿದ್ದ  ವೇಳೆ ಪರಿವಾರಕಾನ ತಿರುವಿನಲ್ಲಿ ಆಟೋರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದು, ಕೂಡಲೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಪ್ರತೀಕ್ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿರುವ ತೇಜಸ್‌ರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Latest News

error: Content is protected !!