- Advertisement -
- Advertisement -
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಐವಾನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯಾಗಿದ್ದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಇಂದು ಐವಾನ್ ಡಿಸೋಜಾ ರವರಿಗೆ ಆಯ್ಕೆಯ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.ಈ ವೇಳೆ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಸಚಿವ ಎಸ್.ಎನ್. ಬೋಸರಾಜು ಉಪಸ್ಥಿತರಿದ್ದರು.
ಈ ಹಿಂದೆ ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯರಾಗಿದ್ದ ಐವಾನ್ ಡಿಸೋಜಾ, ಇಂದು ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ತೆರವಾಗಿದ್ದ ಹನ್ನೊಂದು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ ಹನ್ನೊಂದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಏಳು, ಬಿಜೆಪಿ ಮೂರು ಜೆಡಿಎಸ್ ಒಂದು ಸದಸ್ಯರು ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ.
- Advertisement -