Friday, June 28, 2024
Homeಕರಾವಳಿಉಡುಪಿವಿಧಾನ ಪರಿಷತ್ ಚುನಾವಣೆಗೆ ಮಾಜಿ ಎಂಎಲ್ಸಿ ಐವಾನ್ ಡಿಸೋಜಾಗೆ ಕಾಂಗ್ರೆಸ್ ಟಿಕೆಟ್

ವಿಧಾನ ಪರಿಷತ್ ಚುನಾವಣೆಗೆ ಮಾಜಿ ಎಂಎಲ್ಸಿ ಐವಾನ್ ಡಿಸೋಜಾಗೆ ಕಾಂಗ್ರೆಸ್ ಟಿಕೆಟ್

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಸ್ಥಾನ ಪಡೆದಿದ್ದಾರೆ.

ಎಐಸಿಸಿ ಇಂದು ಪ್ರಕಟಿಸಿರುವ ಏಳು ಅಭ್ಯರ್ಥಿಗಳ ಪಟ್ಟಿಯಲ್ಲಿ ಐವಾನ್ ಡಿಸೋಜಾ ಅವರಿಗೆ ಟಿಕೆಟ್ ದೊರೆತಿದ್ದು, ಅಲ್ಪಸಂಖ್ಯಾತ ಕೋಟಾದಡಿ ಅವಕಾಶ ಪಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿ ಗುರುತಿಸಿಕೊಂಡಿರುವ ಐವಾನ್ ಡಿಸೋಜಾ, ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ, ವಿಪಕ್ಷ ಮುಖ್ಯ ಸಚೇತಕರಾಗಿ ಕಾರ್ಯ ನಿರ್ವಹಿಸಿದ್ದರು.ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ಜೂನ್ 13 ರಂದು ಚುನಾವಣೆ ನಿಗದಿಯಾಗಿದೆ.

ಒಟ್ಟು ಹನ್ನೊಂದು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಸಂಖ್ಯಾಬಲದ ಆಧಾರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಏಳು, ವಿಪಕ್ಷ ಬಿಜೆಪಿ ಮೂರು ಮತ್ತು ಜೆಡಿಎಸ್ ಒಂದು ಸ್ಥಾನಗಳನ್ನು ಪಡೆಯಲಿವೆ.

- Advertisement -
spot_img

Latest News

error: Content is protected !!