Monday, May 6, 2024
Homeಕರಾವಳಿಖಾಸಗಿ ಬಸ್ ಚಾಲಕರು, ನಿರ್ವಾಹಕರು, ಕ್ಲೀನರ್ ಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ

ಖಾಸಗಿ ಬಸ್ ಚಾಲಕರು, ನಿರ್ವಾಹಕರು, ಕ್ಲೀನರ್ ಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ

spot_img
- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರು, ನೇಕಾರರು, ಹೂವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಖಾಸಗಿ ಬಸ್ ನೌಕರರಿಗೂ ಸಹಾಯಧನ ನೀಡಬೇಕೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶೇಕಡ 75 ರಷ್ಟು ಖಾಸಗಿ ಬಸ್ಗಳು ಸಂಚರಿಸುತ್ತವೆ. ಸುಮಾರು 30 ಸಾವಿರಕ್ಕೂ ಅಧಿಕ ಚಾಲಕರು, ನಿರ್ವಾಹಕರು, ಕ್ಲೀನರ್ಗಳು ಕೆಲಸ ನಿರ್ವಹಿಸುತ್ತಿದ್ದು ದಿನಗೂಲಿ ನೌಕರರಾಗಿರುವ ಅವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೆಲಸಕ್ಕೆ ಬಂದರೆ ಮಾತ್ರ ಖಾಸಗಿ ಬಸ್ ಚಾಲಕರು, ನಿರ್ವಾಹಕರು, ಕ್ಲೀನರ್ ಗಳಿಗೆ ಹಣ ಸಿಗುತ್ತದೆ. ಈಗ ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಅವರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!