Tuesday, July 14, 2026
Homeಕರಾವಳಿಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಭೇಟಿ

ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಭೇಟಿ

- Advertisement -
- Advertisement -

ಸುಳ್ಯ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ  ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು.

ಜೆ.ಪಿ.ನಡ್ಡಾ ಅವರು ಹೆಲಿಕಾಪ್ಟರ್ ಮೂಲಕ ಸುಳ್ಯಕ್ಕೆ ಆಗಮಿಸಿ, ರಸ್ತೆ ಮಾರ್ಗದ ಮೂಲಕ ಪ್ರವೀಣ್ ಮನೆಗೆ ಆಗಮಿಸಿದರು.  ಪೊಲೀಸ್ ಇಲಾಖೆ, ಅರೆಸೇನಾ ಪಡೆ ವತಿಯಿಂದ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜೆ.ಪಿ.ನಡ್ಡಾ ಅವರಿಗೆ ಮನೆಯವರನ್ನು ಪರಿಚಯಿಸಿ ಮಾಹಿತಿ ನೀಡಿದರು. ಪ್ರವೀಣ್ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಸೇರಿದಂತೆ ಮನೆಯವರು, ಬಿಜೆಪಿ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!