Wednesday, June 3, 2026
Homeಕರಾವಳಿಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

- Advertisement -
- Advertisement -

ಮಂಗಳೂರು; ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿನ್ನೆ ಮಂಗಳೂರಿಗೆ ಆಗಮಿಸಿದ್ದಾರೆ.

ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಚಿವ ಸುನೀಲ್ ಕುಮಾರ್ ನಡ್ಡಾ ಅವರನ್ನು ಸ್ವಾಗತಿಸಿದರು‌.

ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಕೂಡಾ ಈ ವೇಳೆ ಉಪಸ್ಥಿತರಿದ್ದರು. ನಿನ್ನೆ ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ನಡ್ಡಾ ಇಂದು ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿಯಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ ಮತ್ತು ಬೈಂದೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿರುವ ನಡ್ಡಾ ಇಂದು ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

- Advertisement -

Latest News

error: Content is protected !!