Saturday, June 6, 2026
Homeಕರಾವಳಿತೆಂಕುತಿಟ್ಟಿನ ಯಕ್ಷಗಾನದ ಕಲಾವಿದ ಜಗದೀಶ ನಲ್ಕ ನಿಧನ

ತೆಂಕುತಿಟ್ಟಿನ ಯಕ್ಷಗಾನದ ಕಲಾವಿದ ಜಗದೀಶ ನಲ್ಕ ನಿಧನ

- Advertisement -
- Advertisement -

ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ಒಂದು ತಿಂಗಳ ಹಿಂದೆ ಅನಾರೋಗ್ಯ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಕಳೆದ 21 ವರ್ಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗದೀಶ್ ನಲ್ಕ ಅವರು ಭಗವತಿ ಮಹಾತ್ಮೆಯಲ್ಲಿ ಈಶ್ವರನ ಪಾತ್ರ, ದೇವಿಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜಾಸುರನ ಪಾತ್ರಗಳನ್ನು ಸೊಗಸಾಗಿ ನಿರ್ವಹಿಸುತ್ತಿದ್ದರು. ಅವರು ಪತ್ನಿ, ಪುತ್ರಿ, ಪುಟ್ಟ ಗಂಡು ಮಗುವನ್ನು ಅಗಲಿದ್ದಾರೆ.

- Advertisement -

Latest News

error: Content is protected !!