Monday, April 29, 2024
Homeತಾಜಾ ಸುದ್ದಿಮರಳಿ ಬಿಜೆಪಿಯ ಗೂಡು ಸೇರಿದ ಜಗದೀಶ್‌ ಶೆಟ್ಟರ್‌; ಕಾಂಗ್ರೆಸ್’ಗೆ ಗುಡ್ ಬೈ ಹೇಳಿದ ಶೆಟ್ಟರ್

ಮರಳಿ ಬಿಜೆಪಿಯ ಗೂಡು ಸೇರಿದ ಜಗದೀಶ್‌ ಶೆಟ್ಟರ್‌; ಕಾಂಗ್ರೆಸ್’ಗೆ ಗುಡ್ ಬೈ ಹೇಳಿದ ಶೆಟ್ಟರ್

spot_img
- Advertisement -
- Advertisement -

ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಮರಳಿ ಬಿಜೆಪಿಯ ಗೂಡು ಸೇರಿದ್ದು, ಗುರುವಾರ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ದಿಲ್ಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ನಾಯಕರ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಗುರುವಾರ ಬೆಳಿಗ್ಗೆ ಪಕ್ಷದ ಹಿರಿಯ ಮುಖಂಡ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಬಳಿಕ ಅವರು ಬಿಜೆಪಿಗೆ ಸೇರ್ಪಡೆಯಾಗುವ ತೀರ್ಮಾನ ಹೊರಬಿದ್ದಿದೆ. ಇನ್ನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಅವರಿಗೆ ಯಾವುದೇ ಅಪೇಕ್ಷೆ ಇಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, “ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ಸೇರ್ಪಡೆಯಿಂದ ಮತ್ತಷ್ಟು ಬಲ ಬಂದಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ರಲ್ಲಿ 25 ಸ್ಥಾನವನ್ನು ನಾವು ಗೆಲ್ಲಲಿದ್ದೇವೆ. ಚುನಾವಣೆಯನ್ನು ಎಲ್ಲರೂ ಒಟ್ಟಾಗಿಯೇ ಎದುರಿಸುತ್ತೇವೆ,” ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, “ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು, ಬಿಜೆಪಿಗೆ ಇನ್ನೂ ಹೆಚ್ಚಿನ ಶಕ್ತಿ ಸಿಗಬೇಕು. ನಾನು ಬಿಜೆಪಿಗೆ ಮತ್ತೆ ಮರಳಿ ಬರಬೇಕೆಂದು ರಾಷ್ಟ್ರೀಯ ನಾಯಕರು ಕೂಡ ಆಶಯ ವ್ಯಕ್ತಪಡಿಸಿದ್ದರು. ಅವರ ಮನವಿಯನ್ನು ಮನ್ನಿಸಿ ಬಿಜೆಪಿ ಸೇರುತ್ತಿದ್ದೇನೆ. ಇನ್ನು ನನಗೆ ಮರಳಿ ಬಿಜೆಪಿ ಸೇರಿರುವುದು ಬಹಳ ಸಂತಸದ ಸಂಗತಿ. ನಾನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಲ್ಲಿಂದ ಇಲ್ಲಿಯವರೆಗೆ 9 ತಿಂಗಳಲ್ಲಿ ಬಿಜೆಪಿ ಕಾರ್ಯಕರ್ತರು, ಶಾಸಕರು, ನಾಯಕರು ನೀವು ಮತ್ತೆ ಬಿಜೆಪಿಗೆ ಬರಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದರು,” ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!