Thursday, June 4, 2026
Homeತಾಜಾ ಸುದ್ದಿರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ನವರಸ ನಾಯಕ ಜಗ್ಗೇಶ್

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ನವರಸ ನಾಯಕ ಜಗ್ಗೇಶ್

- Advertisement -
- Advertisement -

ಬೆಂಗಳೂರು ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನಟ ಜಗ್ಗೇಶ್ ಸೇರಿದಂತೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಆಯ್ಕೆಯಾಗಿದ್ದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ರಾಜ್ಯಸಭೆ ಪ್ರವೇಶಿಸಿದ್ದಾರೆ.

ಇನ್ನು ಗೆಲುವಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಟ ಜಗ್ಗೇಶ್, ತಮ್ಮನ್ನು ಆಯ್ಕೆ ಮಾಡಿದ ಎಲ್ಲ ಶಾಸಕರಿಗೆ ಧನ್ಯವಾದ ಅರ್ಪಿಸಿದರಲ್ಲದೆ, ರಾಜ್ಯಸಭಾ ಸದಸ್ಯನಾಗಿ ಕನ್ನಡದಲ್ಲಿಯೇ ನಾನು ಪ್ರಮಾಣವಚನ ಸ್ವೀಕರಿಸುತ್ತೇನೆ. ಕರ್ನಾಟಕದ ದನಿಯಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!