Saturday, August 29, 2026
Homeಕರಾವಳಿಮಂಗಳೂರುಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ;...

ಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ; ದೂರು ದಾಖಲು

- Advertisement -
- Advertisement -

ಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ ಮಾಡಲಾಗಿದೆ ಎಂದು ಪುತ್ತೂರಿನ ಪಡ್ನೂರು ಗ್ರಾಮದ ನಿವಾಸಿ ಜೀವಂದರ್ ಜೈನ್ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನಾಂಕ 29-06-2025 ರಂದು  ಸಂಜೆ  ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಅನ್ನು ನೋಡುತ್ತಿದ್ದಾಗ, “ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಸ್ ಬುಕ್  ಪೇಜ್ ಹೊಂದಿರುವ ವ್ಯಕ್ತಿಯು, ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ, ಜೈನ ಧರ್ಮದ  ಸ್ವಾಮೀಜಿಗೆ ಹಾಗೂ ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳ ಗೌರವಕ್ಕೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ಹಾಗೂ ಸಾರ್ವಜನಿಕ ಶಾಂತಿ ನೆಮ್ಮಧಿಗೆ ಧಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಕಮೆಂಟ್ ಮಾಡಿರುವುದು ಕಂಡುಬಂದಿರುತ್ತದೆ. ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!