- Advertisement -


- Advertisement -
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮಾದಕವಸ್ತು ಪತ್ತೆ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ(42) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಅಡಗಿ ಕುಳಿತಿದ್ದಾನೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನಿಂದ ಕಳೆದ 8 ದಿನಗಳಿಂದ ಮಂಗಳೂರು ಸಿಸಿಬಿ ಪೊಲೀಸರ ಬಂಧನದ ಭೀತಿಯಿಂದ ಎರಡು ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿರುವ ಮಧ್ಯೆ ತನ್ನ ಗೆಳೆಯರ ಸಹಾಯದಿಂದ ಜು.25 ರಂದು ಶನಿವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ದುಬೈ ದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.
- Advertisement -


