Saturday, June 6, 2026
Homeಕರಾವಳಿಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ; ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರಿನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ; ಆರೋಪಿಗಳಿಗೆ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು: ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈ ಮಧ್ಯೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

- Advertisement -

Latest News

error: Content is protected !!