- Advertisement -
- Advertisement -
ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ‘ಜೇಮ್ಸ್’ ಬದಲಿಗೆ ‘ದಿ ಕಾಶ್ಮೀರ್ ಫೈಲ್ಸ್’ ಪ್ರದರ್ಶಿಸಲು ಬಿಜೆಪಿ ನಾಯಕರು ಚಿತ್ರಮಂದಿರಗಳಲ್ಲಿ ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯ ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಜೇಮ್ಸ್’ ನಿರ್ಮಾಪಕರು ಮುಂಗಡ ಹಣ ನೀಡಿ ಥಿಯೇಟರ್ ಬುಕ್ ಮಾಡಿದ್ದಾರೆ. ಆದರೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶನಕ್ಕೆ ಥಿಯೇಟರ್‌ಗಳನ್ನು ನೀಡುವಂತೆ ಒತ್ತಾಯಿಸುತ್ತಿರುವುದು ಕಿರುಕುಳವಲ್ಲದೆ ಮತ್ತೇನಲ್ಲ’ ಎಂದು ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
- Advertisement -