Monday, June 29, 2026
Homeತಾಜಾ ಸುದ್ದಿಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿಗೆ ವ್ಯಕ್ತವಾದ ಆಗ್ರಹ

ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿಗೆ ವ್ಯಕ್ತವಾದ ಆಗ್ರಹ

- Advertisement -
- Advertisement -

ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.ತೆರಿಗೆ ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಈ ವಿಚಾರವಾಗಿ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡಾ ತೆರಿಗೆ ವಿನಾಯಿತಿ ನೀಡಲಿ ಎಂದು ಹೇಳಿದ್ದಾರೆ.

ದಿ. ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಇಂದು ಜಗತ್ತಿನಾದ್ಯಂತ ತೆರೆ ಕಂಡಿದೆ. ರಾಜ್ಯ ಸರ್ಕಾರ ಕೆಲವು ದಿನಗಳ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಬಾಲಿವುಡ್ ಸಿನಿಮಾಗೆ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು

- Advertisement -

Latest News

error: Content is protected !!