- Advertisement -
![]()
- Advertisement -
ಜಮ್ಮು:ಇಲ್ಲಿನ ಶೋಪಿಯಾನ್ ಜಿಲ್ಲೆಯ ಕನಿಗಂ ಪ್ರದೇಶದಲ್ಲಿ ಇಂದು ಎನ್ ಕೌಂಟರ್ ನಡೆದಿದ್ದು ಭಾರತೀಯ ಸೇನೆ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದು ಈವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪ್ರತಿದಾಳಿ ನಡೆಸಿದ ಸೇನೆಯ ಎನ್ ಕೌಂಟರ್ ಗೆ ಇಬ್ಬರು ಬಲಿಯಾಗಿದ್ದಾರೆ. ಪ್ರದೇಶದಲ್ಲಿ ಉಗ್ರರ ಶೋಧಕಾರ್ಯಾಚರಣೆ ಮುಂದುವರೆದಿದೆ.
- Advertisement -


