ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಭಯೋತ್ಪಾದಕರ ವಿರುದ್ಧ ಸಮರ ಸಾರಿದ್ದಾರೆ. ಕಳೆದ ಕೆಲ ದಿನಗಳಿಂದ ಜಮ್ಮು ಕಾಶ್ಮೀರದ ವಿವಿಧೆಡೆ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿದ್ದು, ಗಡಿಭಾಗದಲ್ಲಿ ಒಳನುಸುಳಲು ಯತ್ನಿಸಿರುವ ಭಯೋತ್ಪಾದಕರನ್ನು ಮಟ್ಟಹಾಕಿದ್ದಾರೆ. ಸದ್ಯ ಶೋಪಿಯಾನ್ ಬಳಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹೆಡೆಮುರಿ ಕಟ್ಟಲಾಗಿದೆ.
ಶೋಪಿಯಾನ್ ಜಿಲ್ಲೆಯ ಜಿಯಾನಾಪೊರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಸೇನೆಗೆ ಖಚಿತ ಮಾಹಿತಿ ಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ಸೇನಾಪಡೆ, ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಪಡೆಯ ಸಿಬ್ಬಂದಿ, ಸಿ.ಆರ್.ಪಿ.ಎಫ್ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಕಳೆದ ರಾತ್ರಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಸೇನಾಪಡೆಯ ಗುಂಡಿಗೆ ಈವರೆಗೆ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ. ಸ್ಥಳದಲ್ಲಿ ಇನ್ನು ಇಬ್ಬರು ಉಗ್ರರು ಅಡಗಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಶೋಪಿಯಾನ್ ಭಾಗದ ಆಸುಪಾಸಿನಲ್ಲಿ ಮತ್ತೆ ಹಲವರು ಭಯೋತ್ಪಾದಕರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ…