Wednesday, June 24, 2026
Homeಕರಾವಳಿಮಂಗಳೂರುಬಳ್ಳಾರಿ : ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

ಬಳ್ಳಾರಿ : ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

- Advertisement -
- Advertisement -

ಬಳ್ಳಾರಿ : ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿಯ ಚಿಂತಾಮಣಿ ಮಠದ ತುಂಗಭದ್ರಾ ನದಿಯ ತೀರದಲ್ಲಿ ಗಂಗಾಮಾತೆಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ನೆರವೇರಿಸಲು ತಾಯಿ ತುಂಗಭದ್ರೆಯ ಪವಿತ್ರ ಗಂಗಾಜಲವನ್ನು ಸಂಗ್ರಹಿಸಿ, ನಂತರ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸುವ ಮೂಲಕ ಶ್ರೀ ಧರ್ಮಸ್ಥಳಕ್ಕೆ ಪ್ರಯಾಣವನ್ನು ಆರಂಭಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ತೀವ್ರವಾಗಿ ಖಂಡಿಸಿ, ಕಾರ್ಯಕರ್ತರೊಂದಿಗೆ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯಾತ್ರೆಯನ್ನು ಪ್ರಾರಂಭಿಸಿದರು.

- Advertisement -

Latest News

error: Content is protected !!