Thursday, June 25, 2026
Homeಕರಾವಳಿಕೊರೋನಾ ಗೆದ್ದು ಬಂದ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಹೇಳೋದೇನು ?

ಕೊರೋನಾ ಗೆದ್ದು ಬಂದ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಹೇಳೋದೇನು ?

- Advertisement -
- Advertisement -

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ 83ರ ಹರೆಯದ ಜನಾರ್ದನ ಪೂಜಾರಿಯವರು ಮಹಾಮಾರಿ ಕೊರೋನಾದ ವಿರುದ್ಧ ಹೋರಾಡಿ, ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ.

ಬಂಟ್ವಾಳದಲ್ಲಿ ವಾಸವಿರುವ ಜನಾರ್ಧನ ಪೂಜಾರಿಯವರಿಗೆ ಮತ್ತು ಕುಟುಂಬದವರಿಗೆ ಜುಲೈ 4ರಂದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಮನೆಯ ಕೆಲಸದಾಕೆಯ ಸಂಪರ್ಕದಿಂದ ಕೊರೋನಾ ಹರಡಿದ್ದು, ಕೂಡಲೇ ಕುಟುಂಬದವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಇಂದು ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜನಾರ್ದನ ಪೂಜಾರಿ, ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಾನು ಹಾಗೂ ನನ್ನ ಕುಟುಂಬದ ಮೂವರು ಸದಸ್ಯರು ಜುಲೈ 4ರಂದು ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದೆವು. ದೈವ-ದೇವರ ಅನುಗ್ರಹ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ನಾವೆಲ್ಲರೂ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತೇವೆ. ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳು, ಹಿತೈಷಿಗಳು ಹಾಗೂ ಉತ್ತಮ ಚಿಕಿತ್ಸೆ ನಿಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಹಾಗೂ ಸಂಸ್ಥೆಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇದೇ ವೇಳೆ ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೆಯೇ ರೋಗ ನಿರೋಧಕ ಶಕ್ತಿ ವೃದ್ಧಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ. ಈ ಮೂಲಕ ಪ್ರತಿಯೊಬ್ಬರು ಜಾಗ್ರತೆ ವಹಿಸಿ. ಜೊತೆಗೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಪೂಜಾರಿ ಆತ್ಮಸ್ಥೈರ್ಯ ತುಂಬುವ ಕೆಲಸ ಕೂಡ ಮಾಡಿದ್ದಾರೆ.

- Advertisement -

Latest News

error: Content is protected !!