Thursday, June 25, 2026
Homeತಾಜಾ ಸುದ್ದಿಬಿಜೆಪಿ ಸಭೆಯಲ್ಲಿ ಮುನಿಸು ಮರೆತ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು‌

ಬಿಜೆಪಿ ಸಭೆಯಲ್ಲಿ ಮುನಿಸು ಮರೆತ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು‌

- Advertisement -
- Advertisement -

ಗಂಗಾವತಿ: ಶಾಸಕ ಜಿ. ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಮುನಿಸು ಮರೆತು ಒಂದೇ ವೇದಿಕೆ ಹಂಚಿಕೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಇಂದು ನಡೆದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗಿಯಯಾಗಿದ್ದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಪರಸ್ಪರ ಹಸ್ತಲಾಘವ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವೇದಿಕೆ ಮೇಲೆ ಇಬ್ಬರ ಕೈಯನ್ನೂ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಅಲ್ಲದೇ ಸಭೆಯಲ್ಲಿ ರೆಡ್ಡಿ ಮತ್ತು ಶ್ರೀರಾಮುಲು‌ ಇಬ್ಬರೂ ಅಕ್ಕಪಕ್ಕದ ಆಸನಗಳಲ್ಲೇ ಕುಳಿತಿದ್ದರು.

ಗಂಗಾವತಿ ತಾಲೂಕಿನ ಮರಳಿಯ ಖಾಸಗಿ ಹೋಟೆಲ್ ನಲ್ಲಿ ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ಸಂಘಟನಾ ಸಭೆ ಇಂದು ನಡೆದಿತ್ತು.

ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮತ್ತು ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!