Thursday, June 4, 2026
Homeತಾಜಾ ಸುದ್ದಿಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ ಜನಾರ್ದನ ರೆಡ್ಡಿ

ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ ಜನಾರ್ದನ ರೆಡ್ಡಿ

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ.ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ತಾವು ಯಾವುದೇ ಅಕ್ರಮ ಗಣಿಗಾರಿಕೆ ನಡೆಸದಿದ್ದರೂ ಅಪಪ್ರಚಾರ ಮಾಡಿ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಗಂಗಾವತಿ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದ ಕಾರಣ ಹೊಸ ಪಕ್ಷ ಸ್ಥಾಪಿಸಿ ಜನಾರ್ದನ ರೆಡ್ಡಿ ರಾಜಕಾರಣಕ್ಕೆ ಮರಳುತ್ತಾರೆ ಎಂದು ಹೇಳಲಾಗಿತ್ತು.ಆದರಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!