Thursday, October 15, 2026
Homeತಾಜಾ ಸುದ್ದಿನಾಳೆ ಬೆಂಗಳೂರಿನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ

ನಾಳೆ ಬೆಂಗಳೂರಿನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಾಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಚಾಲುಕ್ಯ ವೃತ್ತದ ಸಮೀಪದಲ್ಲಿರುವ ಪಾರಿಜಾತ ನಿವಾಸದಲ್ಲಿ ಸುದ್ದಿಗೋಷ್ಟಿ ನಿಗದಿಯಾಗಿದೆ.

ಕಳೆದ ಒಂದು ತಿಂಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಸಕ್ರೀಯರಾಗಿರುವ ಜನಾರ್ದನ ರೆಡ್ಡಿ, ಒಂದು ವಾರದಿಂದ ವಿವಿಧ ಮಠಗಳು, ದರ್ಗಾಗಳಿಗೆ ಭೇಟಿ ನೀಡುತ್ತಿದ್ದು, ನಾಳೆ ಸುದ್ದಿಗೋಷ್ಟಿ ಮಹತ್ವ ಪಡೆದಿದೆ.

ಗಣಿ ಪ್ರಕರಣದಲ್ಲಿ ಜೈಲು ಪಾಲಾಗಿ ಬಿಡುಗಡೆಯಾದ ಬಳಿಕ ರಾಜಕೀಯದಿಂದ ದೂರ ಉಳಿದಿದ್ದ ಜನಾರ್ದನ ರೆಡ್ಡಿ, ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಸ್ಪರ್ಧೆಗಿಳಿಯುವುದು ನಿಶ್ಚಿತವಾಗಿದೆ.

ನಾಳೆಯ ಸುದ್ದಿಗೋಷ್ಟಿಯಲ್ಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!