Sunday, June 7, 2026
Homeಕರಾವಳಿಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ಮಂಗಳೂರಿನಲ್ಲಿ ನಿನ್ನೆ ಕೊಲೆಯಾದ  ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‌‌ ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರನ್ನು ಕೊಲೆ ಮಾಡಲಾಗಿತ್ತು ಎನ್ನಲಾಗಿದೆ.ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.


ಜನಾರ್ದನ ಬಾರಿಂಜ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು.
ವೃತ್ತಿಯಲ್ಲಿ ಚಾಲಕನಾಗಿದ್ದು, ನಿನ್ನೆ ಮಧ್ಯಾಹ್ನ ವೇಳೆ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ ‌. ಸ್ವಲ್ಪ ಹೊತ್ತಿನಲ್ಲಿ ಅವರನ್ನು ಕೊಲೆ ಮಾಡಲಾಗಿತ್ತು.ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!