Saturday, June 28, 2025
Homeಜ್ಯೋತಿಷ್ಯಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

spot_img
- Advertisement -
- Advertisement -

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಪು ನೀಡಿದ ಕಾರಣ, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ನ್ಯಾಯಾಲಯದ ತೀರ್ಪು ಮೇ 6 ರಿಂದ ಜಾರಿಗೆ ಬರುವಂತೆ, ವಿಧಾನಸಭೆ ಸಚಿವಾಲಯವು ಜನಾರ್ದನ ರೆಡ್ಡಿ ಅವರನ್ನು ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾಗಿದೆ.


ಸಂವಿಧಾನದ 191 (1) ವಿಧಿ ಅನ್ವಯ ಹಾಗೂ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್‌ 8 ರಡಿ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದು, ಮೇಲಿನ ಹಂತದ ಕೋರ್ಟ್‌ ತಡೆಯಾಜ್ಞೆ ನೀಡದ ಹೊರತು ಮುಂದಿನ 6 ವರ್ಷಗಳ ಅವಧಿಗೆ ಅನರ್ಹತೆ ಜಾರಿಯಲ್ಲಿರಲಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾದಂತಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!