Thursday, June 4, 2026
Homeಕರಾವಳಿಕನ್ಯಾಡಿ ರಾಮ ಮಂದಿರದಲ್ಲಿ ಮಹಾ ಬ್ರಹ್ಮ ರಥೋತ್ಸವ: 62ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹ

ಕನ್ಯಾಡಿ ರಾಮ ಮಂದಿರದಲ್ಲಿ ಮಹಾ ಬ್ರಹ್ಮ ರಥೋತ್ಸವ: 62ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹ

- Advertisement -
- Advertisement -

ಬೆಳ್ತಂಗಡಿ:  ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಮ್ ಶ್ರೀರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ 62ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವವು ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ನಡೆಯಲಿದೆ.

ಜೊತೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಏಪ್ರಿಲ್ 3 ರಿಂದ ಏಪ್ರಿಲ್ 10 ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಇಲ್ಲಿನ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

ಇನ್ನು ಏಪ್ರಿಲ್ 3 ರಂದು ಶ್ರೀರಾಮನಾಮ ಸಪ್ತಾಹದ ನಂದಾದೀಪವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸುನೀಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!