Friday, April 26, 2024
Homeಕರಾವಳಿಉಡುಪಿರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

spot_img
- Advertisement -
- Advertisement -

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ಸರಕಾರ ನೇಮಿಸಿದೆ.

ಬ್ರಹ್ಮಾವರದ ಮಾಜಿ ಶಾಸಕ ಹಾಗೂ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ, ಮೂರು ಬಾರಿ ಕರ್ನಾಟಕ ಸರಕಾರದ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಜಯಪ್ರಕಾಶ್ ಹೆಗ್ಡೆ ಅವರು ನಿಷ್ಕಂಳಂಕ ರಾಜಕಾರಣದಿಂದಾಗಿ ಪ್ರಸಿದ್ಧಿ ಗಳಿಸಿದ್ದರು. ಇವರು ಜೆ.ಎಚ್‌.ಪಟೇಲ್‌ ನೇತೃತ್ವದ ಜನತಾದಳ ಸರ್ಕಾರ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬ್ರಹ್ಮಾವರದಿಂದ ಮೂರು ಸಲ ಆಯ್ಕೆಯಾಗಿದ್ದರು. ಕ್ಷೇತ್ರ ಮರು ವಿಂಗಡಣೆಯಲ್ಲಿ ಬ್ರಹ್ಮಾವರ ಕ್ಷೇತ್ರ ವಿಭಜನೆಯಾಗಿದ್ದರಿಂದ ಕ್ಷೇತ್ರ ಕಳೆದುಕೊಂಡರು.

ರಾಜಕೀಯ ಉಳಿವಿಗಾಗಿ 2009 ರಲ್ಲಿ ಕಾಂಗ್ರೆಸ್‌ ಸೇರಿದ್ದರು. 2012 ರ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾದರು. 2015 ರಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಕೆಲಕಾಲ ತಟಸ್ಥರಾಗಿದ್ದ ಅವರು 2018ರ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಕುಂದಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯೂ ಆಗಿದ್ದರು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಟಿಕೆಟ್‌ ನೀಡಲಾಗಿತ್ತು.

ಇನ್ನು 2014ರ ಜೂನ್‍ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಎಚ್.ಕಾಂತರಾಜ್ ಅವರನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೇಮಕ ಮಾಡಿತ್ತು. ಆದರೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಚಾಲನೆ ನೀಡಿದ್ದ ಆಯೋಗವು ತನ್ನ ಅಂತಿಮ ವರದಿಯನ್ನು ಸಲ್ಲಿಸುವ ಸಿದ್ಧತೆ ನಡೆಸುತ್ತಿದ್ದರಿಂದ, 2017ರ ಜುಲೈನಲ್ಲಿ ಅವರ ಅಧಿಕಾರಾವಧಿಯನ್ನು ರಾಜ್ಯ ಸರಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿಯೂ ಕಾಂತರಾಜ್ ಮುಂದುವರಿದಿದ್ದರು. ಆದರೆ, 2019ರ ಸೆಪ್ಟಂಬರ್ ನಲ್ಲಿ ಅವರು ಜವಾಬ್ದಾರಿಯಿಂದ ಮುಕ್ತರಾದರು. ಅಲ್ಲಿಂದ ಸುಮಾರು ಒಂದು ವರ್ಷ ಎರಡು ತಿಂಗಳುಗಳ ಕಾಲ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಬಿಜೆಪಿ ಸರಕಾರ ಅಧ್ಯಕ್ಷರ ನೇಮಕ ಮಾಡಿರಲಿಲ್ಲ.

- Advertisement -
spot_img

Latest News

error: Content is protected !!