Sunday, May 19, 2024
Homeಕರಾವಳಿಉಡುಪಿಚುನಾವಣೆಗೆ ಸ್ಫರ್ಧೆ ಬಗ್ಗೆ ಒಂದು ವಾರದೊಳಗೆ ತೀರ್ಮಾನ;ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ

ಚುನಾವಣೆಗೆ ಸ್ಫರ್ಧೆ ಬಗ್ಗೆ ಒಂದು ವಾರದೊಳಗೆ ತೀರ್ಮಾನ;ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ

spot_img
- Advertisement -
- Advertisement -

ಉಡುಪಿ: ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಒಂದು ವಾರದ ಒಳಗೆ ತೀರ್ಮಾನ ಮಾಡುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಉಡುಪಿಯಲ್ಲಿ ಪ್ರತಿಕ್ರಿಯಿಸಿರುವ ಜಯಪ್ರಕಾಶ್ ಹೆಗ್ಡೆ, ಮುಂದಿನ ನಿರ್ಧಾರದ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ, ಸ್ನೇಹಿತರು ಮತ್ತು ಆಪ್ತರ ಜೊತೆ ಮುಂದಿನ ರಾಜಕೀಯದ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಬಿಜೆಪಿಯಿಂದ ಅಧಿಕೃತವಾಗಿ ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿರುವ ಜಯಪ್ರಕಾಶ್ ಹೆಗ್ಡೆ, ಬಿಜೆಪಿಯ ಕೆಲವು ಸ್ನೇಹಿತರು ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದಾರೆ, ಒಂದೆರಡು ದಿನ ವೈಯಕ್ತಿಕ ಕೆಲಸಗಳು ಮುಗಿದ ನಂತರ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ ಸಂಜೆ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದ್ದ ಖಾಸಗಿ ಹೋಟೆಲ್ ನಲ್ಲಿ ಜಯಪ್ರಕಾಶ್ ಹೆಗ್ಡೆ ಕಾಣಿಸಿಕೊಂಡಿರುವುದು ಕಾಂಗ್ರೆಸ್ ಸೇರ್ಪಡೆ ಕುರಿತಾದ ವದಂತಿಯನ್ನು ಪುಷ್ಠೀಕರಿಸಿದಂತಾಗಿದೆ.

- Advertisement -
spot_img

Latest News

error: Content is protected !!