Thursday, June 4, 2026
Homeಕರಾವಳಿಧರ್ಮಸ್ಥಳ: ಇಬ್ಬರು ಬಿಜೆಪಿ ಮುಖಂಡರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು

ಧರ್ಮಸ್ಥಳ: ಇಬ್ಬರು ಬಿಜೆಪಿ ಮುಖಂಡರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಭಾರತೀಯ ಜನತಾ ಪಕ್ಷದ ಶಕ್ತಿಕೇಂದ್ರದ ಶಿಪಾರಸ್ಸಿನ ಮೇರೆಗೆ ಜಯರಾಮ ಭಂಡಾರಿ ಹಾಗೂ ರಘುಚಂದ್ರ ರಾವ್ ರವರನ್ನು ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ ರವರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂಘದ ನಿರ್ದೇಶಕರುಗಳಾದ ಜಯರಾಮ ಭಂಡಾರಿ ಹಾಗೂ ರಘುಚಂದ್ರ ರಾವ್ ರವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಕ್ಷವು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!