Thursday, June 4, 2026
Homeಕರಾವಳಿಮಂಗಳೂರು; ನಾಮಪತ್ರ ಹಿಂಪಡೆದು ಜೆಡಿಎಸ್ ಅಭ್ಯರ್ಥಿ ನಾಪತ್ತೆ

ಮಂಗಳೂರು; ನಾಮಪತ್ರ ಹಿಂಪಡೆದು ಜೆಡಿಎಸ್ ಅಭ್ಯರ್ಥಿ ನಾಪತ್ತೆ

- Advertisement -
- Advertisement -

ಮಂಗಳೂರು; ನಾಮಪತ್ರ ಹಿಂಪಡೆದು ಜೆಡಿಎಸ್ ಅಭ್ಯರ್ಥಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ.ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅಲ್ತಾಫ್ ಕುಂಪಲ ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಪಡೆದುಕೊಂಡಿದ್ದರು.ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದರು.

ಆದರೆ ಏ..21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ನೀಡದೇ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.ಈ ಕುರಿತು ಏ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು ಎನ್ನಲಾಗಿದೆ.

ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.ಈ ಬಗ್ಗೆ ಜಿಲ್ಲಾ ಜೆಡಿಎಸ್ ನಾಯಕರು ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!