Friday, May 17, 2024
Homeತಾಜಾ ಸುದ್ದಿವಿಧಾನಸಭೆಯಲ್ಲಿ ಜೆಡಿಎಸ್ ಅಹೋರಾತ್ರಿ ಧರಣಿಗೆ ನಿರ್ಧಾರ

ವಿಧಾನಸಭೆಯಲ್ಲಿ ಜೆಡಿಎಸ್ ಅಹೋರಾತ್ರಿ ಧರಣಿಗೆ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

ಬೆಂಗಳೂರಿನ ಬಿಎಂಎಸ್ ಟ್ರಸ್ಟ್ ಡೀಡ್ ಸಂಬಂಧ ವಿಧಾನಸಭೆಯಲ್ಲಿ ಇಂದು ನಿಯಮ 69 ಅಡಿಯಲ್ಲಿ ನಡೆದ ಚರ್ಚೆಗೆ ರಾಜ್ಯ ಸರ್ಕಾರದ ಕಡೆಯಿಂದ ತನಿಖೆಗೆ ಒಪ್ಪಿಗೆ ಇಲ್ಲದ ಹಿನ್ನೆಲೆಯಲ್ಲಿ ಜೆಡಿಎಸ್ ಅಹೋರಾತ್ರಿ ಧರಣಿಗೆ ಮುಂದಾಗಿದೆ.

ತನಿಖೆಗೆ ಪಟ್ಟು ಹಿಡಿದು ಸದನದಲ್ಲಿ ಉಳಿದಿರುವ ಜೆಡಿಎಸ್ ಶಾಸಕರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಮತ್ತು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮನವೊಲಿಸುವ ಪ್ರಯತ್ನ ನಡೆಸಿದರು.

ಇದಕ್ಕೂ ಮುನ್ನ ಕಲಾಪದ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಡುವೆ ಮಾತಿನ ಸಮರ ನಡೆಯಿತು.

ಚರ್ಚೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ಸಚಿವ ಅಶ್ವಥ್ ನಾರಾಯಣ ರಾಜೀನಾಮೆಗೆ ಸದನದಲ್ಲಿ ಆಗ್ರಹಿಸಿದರು.

- Advertisement -
spot_img

Latest News

error: Content is protected !!