Thursday, June 4, 2026
HomeUncategorizedಸಿಎಂ, ಸ್ಪೀಕರ್ ಸಂಧಾನ ಸಫಲ: ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ಜೆಡಿಎಸ್

ಸಿಎಂ, ಸ್ಪೀಕರ್ ಸಂಧಾನ ಸಫಲ: ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ಜೆಡಿಎಸ್

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಬಿಎಂಎಸ್ ಟ್ರಸ್ಟ್ ಡೀಡ್ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ರಾಜೀನಾಮೆ ಮತ್ತು ತನಿಖೆಗೆ ಒತ್ತಾಯಿಸಿ ಜೆಡಿಎಸ್ ಕೈಗೊಂಡಿದ್ದ ಅಹೋರಾತ್ರಿ ಧರಣಿಯನ್ನು ಕೈಬಿಟ್ಟಿದೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸ್ಪೀಕರ್ ಮನವಿಗೆ ಒಪ್ಪಿದ ಜೆಡಿಎಸ್ ಧರಣಿಯನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ನಾಳೆ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಸಭೆಯಲ್ಲಿ ಜೆಡಿಎಸ್ ಧರಣಿ ಮುಂದುವರಿಯಲಿದೆ.

ಇಂದು ಸಂಜೆ ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಬಿಎಂಎಸ್ ಟ್ರಸ್ಟ್ ಡೀಡ್ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ ನಡೆಸಿ ತನಿಖೆಗೆ ಒತ್ತಾಯಿಸಿದ್ದರು. ಇದಕ್ಕೆ ರಾಜ್ಯ ಸರ್ಕಾರ ಒಪ್ಪದ ಕಾರಣ ಜೆಡಿಎಸ್ ಸದನದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿತ್ತು.

- Advertisement -

Latest News

error: Content is protected !!