Saturday, May 18, 2024
Homeತಾಜಾ ಸುದ್ದಿಕುತೂಹಲ ಕೆರಳಿಸಿದ ಮಧು ಬಂಗಾರಪ್ಪ-ಡಿಕೆ ಶಿವಕುಮಾರ್ ಭೇಟಿ.. ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ.?

ಕುತೂಹಲ ಕೆರಳಿಸಿದ ಮಧು ಬಂಗಾರಪ್ಪ-ಡಿಕೆ ಶಿವಕುಮಾರ್ ಭೇಟಿ.. ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ.?

spot_img
- Advertisement -
- Advertisement -

ಬೆಂಗಳೂರು: ಮಧು ಬಂಗಾರಪ್ಪ ಜೆಡಿಎಸ್ ತೊರೆದು, ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಸುದ್ದಿಗಳು ಹಲವು ತಿಂಗಳುಗಳಿಂದ ಹರಿದಾಡುತ್ತಿದ್ದವು. ಆದರೆ ಇಂದು ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗುವ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗೋದು ಖಚಿತ ಎಂಬಂತೆ ಆಗಿದೆ.

ಈಗಾಗಲೇ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಪಡಿಸಿದ್ದಂತ ಮಧು ಬಂಗಾರಪ್ಪ ಅವರು, ಇಂದು ಕಾಂಗ್ರೆಸ್ ಸೇರೋದಕ್ಕಾಗಿಯೇ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರೊಂದಿಗೆ ಚರ್ಚಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

2018ರ ಲೋಕಸಭಾ ಚುನಾವಣೆಯ ಉಪಚುನಾವಣೆ ನಡೆದಾಗಿನಿಂದಲೂ ಮಧು ಬಂಗಾರಪ್ಪ ಅವರು ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಚುನಾವಣೆ ವೇಳೆ ಕಾಂಗ್ರೆಸ್ ನಾಯಕರಾದ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಧು ಬಂಗಾರಪ್ಪ ಪರ ಪ್ರಚಾರ ನಡೆಸಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಮಧು ಬಂಗಾರಪ್ಪ ಅವರಿಗೆ ದೊಡ್ಡ ಮಟ್ಟದಲ್ಲಿಯೇ ಬೆಂಬಲ ನೀಡಿತ್ತು.

ಸಾಕಷ್ಟು ಬೆಂಬಲಗಳು ದೊರೆತಿದ್ದರೂ ಕೂಡ ಮಧು ಬಂಗಾರಪ್ಪ ಅವರು ಚುನಾವಣೆಯಲ್ಲಿ ಸೋಲು ಕಾಣವಂತಾಗಿತ್ತು. ಬಳಿಕ ಮಧು ಬಂಗಾರಪ್ಪ ಅವರು ಜೆಡಿಎಸ್ ನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದರು. ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿರಲಿಲ್ಲ. ಈ ಎಲ್ಲಾ ಬೆಳವಣಿಗೆಗಳೂ ಊಹಾಪೋಹಗಳಿಗೆ ಮತ್ತಷ್ಟು ಇಂಬು ನೀಡಿತ್ತು.

- Advertisement -
spot_img

Latest News

error: Content is protected !!