Tuesday, May 7, 2024
Homeತಾಜಾ ಸುದ್ದಿಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಪ್ರಣಾಣಿಕೆಯಲ್ಲಿ ಏನೇನಿದೆ?

ಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಪ್ರಣಾಣಿಕೆಯಲ್ಲಿ ಏನೇನಿದೆ?

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಪ್ರಣಾಳಿಕೆ ಜನತಾ ಪ್ರಣಾಳಿಕೆಯನ್ನು ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ ಎಂ ಫಾರೂಕ್, ಪಕ್ಷದ ಕಾರ್ಯಾಧ್ಯಕ್ಷ ಅಲ್ಕೋಡ್ ಹನುಮಂತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಬಿಡುಗಡೆ ಮಾಡಿದರು.

ಇಂದು ಜೆಡಿಎಸ್ ಪಕ್ಷದಿಂದ ಬಿಡುಗಡೆ ಮಾಡಿರುವಂತ ಜನತಾ ಪ್ರಣಾಳಿಕೆ-2023ರಲ್ಲಿ ಪಂಚ ರತ್ನ ಯೋಜನೆಯ ಐದು ಅಂಶಗಳುಳ್ಳ ಈ ಯೋಜನೆಯನ್ನು ಜಾರಿಗೆ ತರುವುದೇ ಮುಂಬರುವ ನಮ್ಮ ಸರ್ಕಾರದ ಗುರಿಯಾಗಿದೆ. ಇದರ ಪ್ರಚಾರಕ್ಕಾಗಿ ಪಂಚರತ್ನ ರಥಯಾತ್ರೆಯು ರಾಜ್ಯದ 25 ಜಿಲ್ಲೆಗಳಿಂದ 102 ವಿಧಾನಸಭಾ ಕ್ಷೇತ್ರಗಳಲ್ಲಿ 103 ದಿನಗಳು ಚಲಿಸಿದ ಸಂದರ್ಭದಲ್ಲಿ ಪ್ರತಿ ಕ್ಷೇತ್ರದಲ್ಲೂ ಜನತೆ ಅಭೂತಪೂರ್ವವಾಗಿ ಸ್ವಾಗತಿಸಿ, ಪಕ್ಷವನ್ನು ಆಶೀರ್ವದಿಸಿದ್ದಾರೆ ಎಂದಿದೆ.

ಪಂಚರತ್ನ ಯೋಜನೆಯನ್ನು ಮನೆ ಮನೆಗಳಿಗೆ ತಲುಪಿಸಿ, ಕರ್ನಾಟಕ ಜನತೆಯ ಮನದ ಅಂಗಳದಲ್ಲಿ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಸ್ಥಾಪಿಸುವುದೇ ನಮ್ಮ ಗುರಿಯಾಗಿದೆ. ಮುಂಬರುವ ಸರ್ಕಾರವನ್ನು ಕರುನಾಡ ಜನಾಭಿಪ್ರಾಯ ಆಧಾರಿತ ಜನತಾ ಸರ್ಕಾರ ಮಾಡುವುದೇ ನಮ್ಮ ಗುರಿಯಾಗಿದೆ ಎಂದಿದೆ.

ಜನತಾ ಜಲಧಾರೆ, ಜನತಾ ಮಿತ್ರ, ಪಂಚರತ್ನ ರಥಯಾತ್ರೆ ಸಮಯದಲ್ಲಿ ಜನತೆಯಿಂದ ಸ್ವೀಕೃತವಾದ ಸಲಹೆ, ನಿರೀಕ್ಷೆ, ಆಪೇಕ್ಷೆಗಳನ್ನು ಆಧರಿಸಿ ಹಾಗೂ ಕರ್ನಾಟಕ ಸಮಗ್ರ ಅಭಿವೃದ್ಧಿಯ ಅಗತ್ಯತೆಗೆ ಅನುಗುಣವಾಗಿ ಜನತಾ ಪ್ರಣಾಳಿಕೆ ತಯಾರಿಸಲಾಗಿದೆ ಎಂದು ತಿಳಿಸಿದೆ.

ಸಾಮಾಜಿಕ ಭದ್ರತೆಯ ಅಡಿಯಲ್ಲಿ ಮಾತೃಶ್ರೀ ಯೋಜನೆ ಜಾರಿಗೊಳಿಸಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಲಾಗುತ್ತದೆ. ವಿಧವಾ ವೇತನ 900 ರೂ ನಿಂದ 2500ಕ್ಕೆ ಹೆಚ್ಚಳ ಮಾಡಲಾಗುತ್ತದೆ. ವರ್ಷಕ್ಕೆ ಐದು ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಲಾಗುತ್ತದೆ ಎಂಬುದಾಗಿ ಭರವಸೆ ನೀಡಲಾಗಿದೆ.

ರೈತಬಂಧು ಯೋಜನೆ ಜಾರಿ, ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ 2 ಲಕ್ಷ ರೂ ಪ್ರೋತ್ಸಾಹಧನ ನೀಡಲಾಗುವುದು. ರಾಜ್ಯದ ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು 2 ಸಾವಿರ ರೂ ಮಾಸಾಶನ. ನೋಂದಾಯಿತ ಖಾಸಗಿ ಸೆಕ್ಯೂರಿಟಿ ಗಾರ್ಡ್ ಗಳಿಗೆ ಪ್ರತಿ ತಿಂಗಳು 2 ಸಾವಿರ ರೂ ಸಹಾಯ ಧನ ನೀಡಲಾಗುವುದು ಎಂದು ಹೇಳಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಆರ್ ಬಿ ಎಸ್ ಕೆ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಎ ಎಂಎಸ್ ವೈದ್ಯರಿಗೆ ನೀಡುವ ವೇತನ ತಾರತಮ್ಯ ಬಗೆಹರಿಸಲಾಗುತ್ತದೆ. ಕಲಾವಿದರಿಗೆ ವಸತಿ ಯೋಚನೆಯಡಿ ವಸತಿ, ನಿವೇಶ, ಮಾಶಾಸನ ಜಾರಿಗೊಳಿಸಲಾಗುತ್ತದೆ ಎಂದಿದೆ.

ಪಂಚರತ್ನ ಯೋಜನೆಗಳಾದಂತ ವಸತಿಯ ಆಸರೆ, ಶಿಕ್ಷಣವೇ ಅಧುನಿಕ ಶಕ್ತಿ, ಆರೋಗ್ಯ, ಸಂಪತ್ತು. ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ ಮತ್ತು ರೈತ ಚೈತನ್ಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ. ಕಳೆದ ವರ್ಷ ನವೆಂಬರ್ 18ರಂದು ಮುಳುಬಾಗಿಲು ಕ್ಷೇತ್ರದಿಂದ ಆರಂಭಗೊಂಡ ಪಂಚರತ್ನ ರಥಯಾತ್ರೆ ನಾಡಿನ ಜನತಂತ್ರ ವ್ಯವಸ್ಥೆಯ ಇತಿಹಾಸದಲ್ಲಿಯೇ ಒಂದು ಮೈಲುಗಲ್ಲು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಸಾಮಾಜಿಕ ಭದ್ರತೆ, ಪಂಚರತ್ನ ಯೋಜನೆಗಳಾದಂತ ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯವೇ ಸಂಪತ್ತು, ರೈತ ಚೈತನ್ಯ, ವಸತಿ ಆಸರೆ, ಯುವಜನ ಮಾರ್ಗ ಮತ್ತು ಮಹಿಳಾ ಸಬಲೀಕರಣ ಜಾರಿ. ಕೈಗಾರಿಕಾಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ-ಸಂಪರ್ಕ ಸೇತುವೆಗಳು, ಇಂಧನವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಗಳಂತ ವಲಯಕ್ಕೂ ವಿಶೇಷ ಯೋಜನೆಗಳನ್ನು ಜೆಡಿಎಸ್ ಬಿಡುಗಡೆ ಮಾಡಿರುವಂತ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

- Advertisement -
spot_img

Latest News

error: Content is protected !!