Friday, June 5, 2026
Homeತಾಜಾ ಸುದ್ದಿರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್ ಪಕ್ಷದಿಂದ ಶಾಸಕರಾದ ಶ್ರೀನಿವಾಸ ಗೌಡ ಮತ್ತು ಎಸ್.ಆರ್. ಶ್ರೀನಿವಾಸ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್ ಪಕ್ಷದಿಂದ ಶಾಸಕರಾದ ಶ್ರೀನಿವಾಸ ಗೌಡ ಮತ್ತು ಎಸ್.ಆರ್. ಶ್ರೀನಿವಾಸ್ ಉಚ್ಚಾಟನೆ

- Advertisement -
- Advertisement -

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇದೇ ವೇಳೆ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನಾಳೆ ಅಥವಾ ನಾಡಿದ್ದಿನ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ವಿಪ್ ನೀಡಿದ್ದರೂ ಪಕ್ಷದ ಅಧಿಕೃತ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಮತ ನೀಡದೇ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಶಾಸಕರಾದ ಶ್ರೀನಿವಾಸ ಗೌಡ ಮತ್ತು ಎಸ್. ಆರ್. ಶ್ರೀನಿವಾಸ್ ಮತ ಚಲಾಯಿಸಿದ್ದರು.

- Advertisement -

Latest News

error: Content is protected !!