Wednesday, June 24, 2026
Homeತಾಜಾ ಸುದ್ದಿಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್‌.ಡಿ. ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್‌.ಡಿ. ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ

- Advertisement -
- Advertisement -

ಬೆಂಗಳೂರು:ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಪುನರಾಯ್ಕೆ ಬಗ್ಗೆ ಪಕ್ಷದ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡಿದ್ದಾರೆ‌.

ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿರುವ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ಜೆಡಿಎಸ್ ರಾಷ್ಟ್ರೀಯ ಮಂಡಳಿ ಬಂದಿದೆ.

ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬಂದು ಇಪ್ಪತ್ತೈದು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಮಂಡಳಿ ಸಭೆ ನಡೆದಿದ್ದು, ನಾಳೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜರುಗಲಿದೆ.

- Advertisement -

Latest News

error: Content is protected !!