Friday, June 5, 2026
Homeತಾಜಾ ಸುದ್ದಿಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇವೇಗೌಡರ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್​ ಆಕ್ರೋಶ

ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇವೇಗೌಡರ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್​ ಆಕ್ರೋಶ

- Advertisement -
- Advertisement -

ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ಅದ್ದೂರಿಯಾಗಿ ಅನಾವರಣ ಮಾಡಲಾಗಿದೆ. ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಉದ್ಘಾಟನೆ ಮಾಡಿದ್ದಾರೆ. ಈ ಮಧ್ಯೆ, ಪ್ರತಿಮೆ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರನ್ನು ಆಹ್ವಾನಿಸದಿರುವುದ್ದಕ್ಕೆ ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್​ ಆಕ್ರೋಶ ವ್ಯಕ್ತಪಡಿಸಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ ಎಂದು ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದೆ. ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ  ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

- Advertisement -

Latest News

error: Content is protected !!