Friday, June 5, 2026
Homeತಾಜಾ ಸುದ್ದಿಇಂದು ಜೆಡಿ ಎಸ್ 'ಪಂಚರತ್ನ' ರಥ ಯಾತ್ರೆಗೆ ಸಾಂಕೇತಿಕ ಚಾಲನೆ

ಇಂದು ಜೆಡಿ ಎಸ್ ‘ಪಂಚರತ್ನ’ ರಥ ಯಾತ್ರೆಗೆ ಸಾಂಕೇತಿಕ ಚಾಲನೆ

- Advertisement -
- Advertisement -

ಬೆಂಗಳೂರು :  ಇಂದು ಜೆಡಿ ಎಸ್ ‘ಪಂಚರತ್ನ’ ರಥ ಯಾತ್ರೆಗೆ ಸಾಂಕೇತಿಕ ಚಾಲನೆ ಸಿಗಲಿದೆ.

ಇಂದು ಬೆಳಗ್ಗೆ 9 :45 ಕ್ಕೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಜೆಡಿಎಸ್ ಮುಖಂಡರು, ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ ಜನ ಸಂಕಲ್ಪದಿಂದ ಮತದಾರರ ಮನ ಗೆಲ್ಲಲು ಯತ್ನಿಸುತ್ತಿದೆ. ಮತ್ತೊಂದೆಡೆ ಜೆಡಿಎಸ್ ಪಕ್ಷ ಕೂಡ ಮುಂಬರುವ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತದ ಪಂಚರತ್ನ ರಥಯಾತ್ರೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚಯಾತ್ರೆಯಲ್ಲಿ ಈ ಬಗ್ಗೆ ಯೋಜನೆ ರೂಪಿಸಲಾಗಿದೆ.

- Advertisement -

Latest News

error: Content is protected !!