Monday, May 13, 2024
Homeತಾಜಾ ಸುದ್ದಿಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಪತ್ನಿ-ಪುತ್ರಿಗೆ ಕೊರೋನಾ ಪಾಸಿಟಿವ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಪತ್ನಿ-ಪುತ್ರಿಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಸಕಲೇಶಪುರ: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಸಕಲೇಶಪುರ ಶಾಸಕ ಹೆಚ್.ಕೆ ಕುಮಾರಸ್ವಾಮಿಯವರ ಪತ್ನಿ, ಜಿಲ್ಲಾ ಪಂಚಾಯತ್​ ಸದಸ್ಯೆ ಚಂಚಲಾ ಕುಮಾರಸ್ವಾಮಿ ಹಾಗೂ ಮಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.

ಕಳೆದ ವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ, ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವ ತೆಗೆದು‌ ಹಾಸನದ ಟೆಸ್ಟಿಂಗ್ ಕೇಂದ್ರಕ್ಕೆ ರವಾನೆ ಮಾಡಲಾಗಿತ್ತು. ಬೆಳಗೋಡು ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯೆಯಾಗಿರುವ ಚಂಚಲ ಕುಮಾರಸ್ವಾಮಿ, ಅವರ ಮಗಳು ಹಾಗೂ ಕಾರಿನ ಡ್ರೈವರ್ ಗೆ ಕೊರೋನಾ ಧೃಢವಾಗಿದ್ದು, ಪಾಸಿಟಿವ್ ವರದಿ ಬಂದಿದೆ.

ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ಮೊದಲ ವರದಿಯಲ್ಲಿ ನನಗೆ ಪಾಸಿಟಿವ್ ಕಂಡು ಬಂದಿಲ್ಲ. ಮುನ್ನೆಚ್ಚರಿಕೆಯಾಗಿ ಬೇರೆ ಮನೆಗೆ ಸ್ಥಳಂತರವಾಗಿದ್ದೇನೆ. ಒಂದು ವಾರಗಳ ಕಾಲ ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು ಹೋಂ ಕ್ವಾರಂಟೈನ್ ನಲ್ಲಿ ಇರಲು ನಿರ್ಧರಿಸಿದ್ದೇನೆ. ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅಗತ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!