Thursday, June 25, 2026
HomeWorldಪ್ರಧಾನಿ ಮೋದಿ ಉಗ್ರರ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್‌ ಬೆಂಬಲವಿದೆ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಪ್ರಧಾನಿ ಮೋದಿ ಉಗ್ರರ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್‌ ಬೆಂಬಲವಿದೆ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

- Advertisement -
- Advertisement -

ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಮುಕ್ತ ಕಂಠದಿಂದ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಅವರು ಈ ಕುರಿತಂತೆ ನವದೆಹಲಿಯ ಮಾಧ್ಯಮದವರೊಂದಿಗೆ ಮಾತನಾಡಿ, ‘ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು ಹೇಯ ಕೃತ್ಯವಾಗಿದೆ. ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ,’ ಎಂದು ಸ್ಪಷ್ಟಪಡಿಸಿದರು.

ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದು, ಇಂತಹ ನಿರ್ಧಾರ ಇತಿಹಾಸದಲ್ಲಿ ಇದೇ ಮೊದಲು. ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement -

Latest News

error: Content is protected !!