Saturday, June 6, 2026
Homeಕರಾವಳಿರಮಾನಾಥ ರೈ ಅವರಿಗೆ ಡಾ. ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ

ರಮಾನಾಥ ರೈ ಅವರಿಗೆ ಡಾ. ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಬಿ.‌ರಮಾನಾಥ್ ರೈ ಅವರಿಗೆ ದಿ. ಡಾ. ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು ಬಂಟರ ಸಂಘದಿಂದ ಬಂಟರ ಭವನದಲ್ಲಿ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಇದೇ ವೇಳೆ ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ. ಡಾ.ಡಿ.ಕೆ. ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಾಮಾಜಿಕ‌ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಅಧ್ಯಕ್ಷ ಕೆ.ಸಿ. ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಮ್. ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ. ಶೆಟ್ಟಿ ಹಾಲಾಡಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!