Sunday, May 5, 2024
Homeಕರಾವಳಿಉಡುಪಿಗಂಗೊಳ್ಳಿ ಬಂದರಿನಲ್ಲಿ ನಿರ್ಮಾಣ ಹಂತದಲ್ಲೇ ಜೆಟ್ಟಿ ಕುಸಿತ: ಗುತ್ತಿಗೆದಾರ ಕಂಪನಿ, ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ...

ಗಂಗೊಳ್ಳಿ ಬಂದರಿನಲ್ಲಿ ನಿರ್ಮಾಣ ಹಂತದಲ್ಲೇ ಜೆಟ್ಟಿ ಕುಸಿತ: ಗುತ್ತಿಗೆದಾರ ಕಂಪನಿ, ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಯಶ್‌ಪಾಲ್‌ ಸುವರ್ಣ ಆಗ್ರಹ

spot_img
- Advertisement -
- Advertisement -

ಗಂಗೊಳ್ಳಿ: ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲೇ ಜೆಟ್ಟಿ ಕುಸಿತಕ್ಕೊಳಗಾಗಿದ್ದು, ಮೀನುಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಕೂಡಲೇ ಗುತ್ತಿಗೆದಾರ ಕಂಪನಿ ಹಾಗೂ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ ಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

12 ಕೋಟಿ ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿಗೆ ಮಂಜೂರಾಗಿ 180 ಮೀಟರ್ ಕೆಲಸವೂ ನಡೆದಿತ್ತು. ಆದ್ರೆ ಅವೈಜ್ಞಾನಿಕ ಕಾಮಗಾರಿಯಿಂದ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಲವು ಪಿಲ್ಲರ್ ಕುಸಿದಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಎಂದು ಯಶ್ಪಾಲ್‌ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ರು.

- Advertisement -
spot_img

Latest News

error: Content is protected !!