ಬೆಳ್ತಂಗಡಿ : ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ: ಇತ್ತೀಚೆಗೆ ಶಾಸಕ ಹರೀಶ್ ಪೂಂಜಾರ ಮನೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ಪಕ್ಷದ ಧ್ವಜ ನೀಡಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರುಗಳಾದ ಸುಬ್ರಮಣ್ಯ ಶಬರಾಯ ಮತ್ತು ತುಕಾರಾಮ ಗೌಡ ಉಪಸ್ಥಿತರಿದ್ದರು.