Tuesday, May 21, 2024
Homeತಾಜಾ ಸುದ್ದಿಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಮಹತ್ವದ ತೀರ್ಪು

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಮಹತ್ವದ ತೀರ್ಪು

spot_img
- Advertisement -
- Advertisement -

ವಾರಣಾಸಿ: ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಪ್ರಕಟವಾಗಿದೆ. ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ಐವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ.

ಈ ನಡುವೆ ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದ ಬೆನ್ನಲೇ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮುಸ್ಲಿಂಪರ ಅರ್ಜಿದಾರು ಮುಂದಾಗಿದ್ದಾರೆ ಎನ್ನಲಾಗಿದೆ.

ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು.

ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಕ್ನೋದಲ್ಲಿ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರು ಲಕ್ನೋ ಚೌಕ್ ಛೇದಕದಿಂದ ನಖಾಸ್ ಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು. ಭದ್ರತೆಯ ದೃಷ್ಟಿಯಿಂದ, ಆಯುಕ್ತರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಇಡೀ ಪ್ರದೇಶವನ್ನು ಡ್ರೋನ್ ಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ.

- Advertisement -
spot_img

Latest News

error: Content is protected !!