Wednesday, June 3, 2026
Homeಕರಾವಳಿಉಡುಪಿಕರಾವಳಿ ಭಾಗದಲ್ಲಿ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ; ಕುಂದಾಪ್ರ ಕನ್ನಡ ಹಬ್ಬದಲ್ಲಿ ಡಿಸಿಎಂ ಡಿ.ಕೆ....

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ; ಕುಂದಾಪ್ರ ಕನ್ನಡ ಹಬ್ಬದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದಲ್ಲಿ‌ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿ‌ ನಂದಿ ಲಿಂಕ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಕುಂದಾಪ್ರ ಕನ್ನಡ ಹಬ್ಬ- 2025ರಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ,
ಕರಾವಳಿ ಭಾಗ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಈ ಕಾರಣಕ್ಕೆ ಈಗಾಗಲೇ ಸದನದಲ್ಲಿ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ಮಾಡುವುದಾಗಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮೈಸೂರು ದಸರಾದಲ್ಲಿ ಕಂಬಳ ಮಾಡುವ ಆಲೋಚನೆಯಿತ್ತು. ಆದರೆ ಮುಖ್ಯಮಂತ್ರಿಗಳು ಆ ಗಡಿಬಿಡಿಯಲ್ಲಿ ಮಾಡುವುದು ಬೇಡ, ಮಧ್ಯದಲ್ಲಿ ಯಾವಾಗಲಾದರೂ ಮಾಡೋಣ ಎಂದಿದ್ದಾರೆ. ಯಕ್ಷಗಾನ ಸೇರಿದಂತೆ ನಾಟಕ, ಸಾಹಿತ್ಯ ಯಾವುದೂ ಸಹ ಅಳಿಸಿ ಹೋಗಬಾರದು ಎಂಬುದು ನಮ್ಮ‌‌‌ ಕಾಳಜಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

- Advertisement -

Latest News

error: Content is protected !!